ಹುಬ್ಬಳ್ಳಿ: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು. ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ, ಅವರ ಪತ್ನಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಗಂಗಮ್ಮ ಬಳ್ಳಾರಿ, ಮಕ್ಕಳು ಮನೋರಂಜನ್ ಮತ್ತು ಕಾರುಣ್ಯ ಗಾಯಗೊಂಡವರಾಗಿದ್ದಾರೆ.
ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ನಾಲ್ವರೂ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಕೆ.ಎಂ.ಸಿ.ಆರ್.ಐ. ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ವೈದ್ಯಕೀಯ ಮೂಲಗಳ ಪ್ರಕಾರ, ಗಂಗಮ್ಮ ಬಳ್ಳಾರಿ ಅವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಕುರಿತು ಅಶೋಕ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.