ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ.
ಯುವಕನ ಅಕಾಲಿಕ ಮರಣದಿಂದ ಕುಟುಂಬ ಹಾಗೂ ಗ್ರಾಮದವರು ಶೋಕದಲ್ಲಿದ್ದಾರೆ.
ತಜ್ಞರ ಎಚ್ಚರಿಕೆ ಪ್ರಕಾರ, ಇತ್ತೀಚಿನ ಜೀವನಶೈಲಿ ಹಾಗೂ ಖಾದ್ಯ ಪದಾರ್ಥಗಳ ಅಭ್ಯಾಸಗಳು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುತ್ತಿರುವುದಾಗಿ ತಿಳಿಸಲಾಗಿದೆ.