ಹುಬ್ಬಳ್ಳಿ: ಕಸಬಾಪೇಟೆ ಪೋಲಿಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಈಶ್ವರ ನಗರದಲ್ಲಿ ದೂರದ ಮಿರಜ್\’ದಿಂದ ತಂದು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಮಾರ್ಗದರ್ಶನದಲ್ಲಿ ಪಿಎಸ್ಐ ವಿಶ್ವನಾಥ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಇವರಿಂದ 500 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಕಸಬಾಪೇಟೆ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.