ಹುಬ್ಬಳ್ಳಿ; ನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಅಸ್ಥಿಪಂಜರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಆಸ್ಪತ್ರೆಯ ಮಹಿಳಾ ಹಾಸ್ಟೆಲ್ ಹಿಂಭಾಗದಲ್ಲಿನ ಚರಂಡಿಯ ಸ್ವಚ್ಚತೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಅಸ್ಥಿಪಂಜರದ ಮೂಳೆ ಹಾಗೂ ತಲೆ ಬುರುಡೆ ಪತ್ತೆಯಾಗಿದೆ.
ಕಳೆದ ಐದಾರು ತಿಂಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಧರಿಸಿರುವ ಬಟ್ಟೆಯಲ್ಲಿ ಪಿಓಪಿ ಫೌಡರ್ ಇದ್ದು, ಅದರಳೊಗೆ ಮೂಳೆಗಳು ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ.
ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.