ಹುಬ್ಬಳ್ಳಿ: ಅಕ್ರಮ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಪನಗರ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ.
ಗವಿಗಲ್ಲಿಯ ಫಯಾಜ್ ಉಂಟವಾಲೆ, ಗೌಳಿಗಲ್ಲಿಯ ಕಿರಣ ಗತ್ತಿ ಎಂಬಾತರೇ ಬಂಧಿತರಾಗಿದ್ದು, ಇವರು ದೇಶಪಾಂಡೆ ನಗರದ ಗುಜರಾತ್ ಭವನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದ ಹಾಗೇ ಇನ್ಸ್ಪೆಕ್ಟರ್ ವಿ.ಪಿ ಸಾಲಿಮಠ ಅವರ ನೇತೃತ್ವದ ತಂಡ ದಾಳಿ ಮಾಡಿ ಅಂದಾಜು 390 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಉಪನಗರ ಪೊಲೀಸರ ಕಾರ್ಯಕ್ಕೆ ಪೊಲೀಸ ಆಯುಕ್ತೆ ರೇಣುಕಾ ಸುಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.