ಹುಬ್ಬಳ್ಳಿ: ನಿಷೇಧಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧನ ಮಾಡುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾನಗರ ಇನ್ಸ್ಪೆಕ್ಟರ್ ಡಿ.ಕೆ ಪಾಟೀಲ್ ನೇತೃತ್ವದ ತಂಡ ಸಿದ್ದಾರೂಢ ನಗರದ ಸಿದ್ದಾರ್ಥ್ ಅಥಣಿ ಅನ್ನೋ ಆರೋಪಿಯನ್ನು ಬಂಧನ ಮಾಡಿ ಆತನಿಂದ 180 ಗ್ರಾಂ ಗಾಂಜಾ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿದ್ಯಾನಗರ ಠಾಣೆಯ ಇನ್ಸ್ಪೆಕ್ಟರ್ ಡಿ ಕೆ ಪಾಟೀಲ್ ಇವರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದು ಇವರುಗಳ ಕಾರ್ಯಕ್ಕೆ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.