ಹುಬ್ಬಳ್ಳಿ: ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಹಳಿಯಾಳ ರಸ್ತೆ ಬೈಪಾಸ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಬೆಳಗಾವಿ ಕಡೆ ಹೊರಟಿದ್ದ ಲಾರಿ ಹಾಗೂ ಎದುರು ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಇಬ್ಬರು ಹಾಗೂ ಗಂಭೀರವಾಗಿ ಗಾಯಗೊಂಡವರ ಮಾಹಿತಿ ತಿಳಿದು ಬಂದಿಲ್ಲ.
ಲಾರಿಯಲ್ಲಿ ಸಿಲುಕಿಕೊಂಡವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಯವರು ಹೊರ ತೆಗದಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.