ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ದೋಚಿ ಪರಾರಿಯಾಗಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕಲಘಟಗಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಠಾಣೆಯ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಅವರ ನೇತೃತ್ವದ ತಂಡವು ಪ್ರಕರಣವನ್ನು ಬೇಧಿಸಿದ್ದು, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ನಿವಾಸಿ ಆಸ್ಪಕ ತಳವಾಯಿ ಎಂಬಾತನನ್ನು ಬಂಧನ ಮಾಡಿದ್ದು, ಆತನಿಂದ 15000 ನಗದು ಹಾಗೂ ಒಂದು ಕಾರ್ ವಶಪಡಿಸಿಕೊಳ್ಳಲಾಗಿದೆ.
ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ ಅವರ ಮಾರ್ಗದರ್ಶನದಲ್ಲಿ ಕಲಘಟಗಿ ಠಾಣೆಯ ಇನ್ಸಪೆಕ್ಟರ ಶ್ರೀಶೈಲ ಕೌಜಲಗಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಇನ್ನು ಇವರ ಕಾರ್ಯಾಚರಣೆಗೆ ಪೊಲೀಸ್ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.