ಹುಬ್ಬಳ್ಳಿ: ಚಲುಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇಂಡಿಗೋ ಕಾರಿನಲ್ಲಿ ಕುಟುಂಬ ಸಮೇತವಾಗಿ ಹುಬ್ಬಳ್ಳಿಯ ಗಣೇಶಪೇಟೆಯಿಂದ ಗೋಕುಲ್ ರಸ್ತೆ ಕಡೆಗೆ ತೆರುಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕೂಡಲೇ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಅವಘಡ ತಪ್ಪಿದಂತಾಗಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕುಟುಂಬಸ್ಥರು ಕಾರಿನಿಂದ ಹೊರ ಬಂದಿದ್ದಾರೆ. ಈ ಕುರಿತಂತೆ ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.