ಅಜಿತ್ ಪವಾರ್ ಬಣದ ಎನ್ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಅವರು ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾಗಿದ್ದಾರೆ.
ಬಾಂದ್ರಾ ಪೂರ್ವದ ಶಾಸಕರಾಗಿರುವ ಸಿದ್ದಿಕ್ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಗುಂಡು ಹಾರಿಸಲಾಗಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.
ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದ್ದು. ಪೋಲಿಸ್ ತಂಡಗಳು ಸ್ಥಳಕ್ಕೆ ಧಾವಿಸಿರುವುದರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ, ”ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ನ ಗುಂಡಿನ ದಾಳಿಗೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಿಕಿ ಇತ್ತೀಚೆಗೆ ಕಾಂಗ್ರೆಸ್ನಿಂದ ಎನ್ಸಿಪಿ ಸೇರಿದ್ದರು.