ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಇರ್ಕಲ್ ಓಣಿಯ ನಿವಾಸಿ ಫರ್ಧೀನ್ (30) ಮೃತಪಟ್ಟವರಾಗಿದ್ದು, ಧಾರವಾಡದ ನರೇಂದ್ರ ಟೋಲ್ ಬಳಿ ಈ ಘಟನೆ ನಡೆದಿದೆ. ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು, ಅತಿ ವೇಗದ ಚಾಲನೆ ಪರಿಣಾಮ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.