ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಓರ್ವ ಗಂಭೀರವಾಗಿ ಗಾಯಗೊಂಡು ಮತ್ತೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆದಿದೆ.
ಅರ್ಬಾಜ್ ಮುಜಾವರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಅಲ್ತಾಫ್ ಬೇಪಾರಿ, ಸಾಹಿಲ್ ಬೇಪಾರಿ, ಸೋಹೇಲ್, ತನವೀರ ಹಲ್ಲೆ ಮಾಡಿದವರಾಗಿದ್ದಾರೆ.
ಕಟ್ಟಿಗೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಅರ್ಬಾಜ್ ಮುಜಾವರ್’ನಿಗೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ಇನ್ನು ಅರ್ಬಾಜ್ ತಮ್ಮನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶರಹ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಮ್.ತಹಶಿಲ್ದಾರ, ಪಿಎಸ್ಐ ವಿನೋದ್ ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕಾನೂನಾತ್ಮಕ ಕ್ರಮ ಕೈಗೊಂಡಿದ್ದಾರೆ.