ಹುಬ್ಬಳ್ಳಿ: ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಎಸ್ ಡಿಪಿಐ ಸಂಘಟನೆಯ ಕಾರ್ಯಕರ್ತರು 270 ನೇ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಿದರು.
ಈ ವೇಳೆ ಟಿಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದರು.
ಬಳಿಕ ಟಿಪ್ಪು ಮೆರವಣಿಗೆ ಎಸ್ ಡಿಪಿಐ ಕಾರ್ಯಕರ್ತರು ಮುಂದಾದರು. ಈ ವೇಳೆ ಮೆರವಣಿಗೆಗೆ ಅನುಮತಿಯಿಲ್ಲದ ಕಾರಣ 31 ಎಸ್ಡಿಪಿಐ ಕಾರ್ಯಕರ್ತರನ್ನು ಕಸಬಾಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.