ಹುಬ್ಬಳ್ಳಿ ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಅಪಘಾತ ನಡೆದಿದ್ದು, ನಿಂತಿದ್ದ ಕಬ್ಬು ತುಂಬಿದ ಟ್ರಾಕ್ಟರ್ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ತುಂಬರಮಟ್ಟಿ ಕ್ರಾಸ್ ಬಳಿ ನಡೆದಿದೆ.
ಬೆಳಗಿನ ಜಾವ 4 ಗಂಟೆಗೆ ಈ ಭೀಕರ ಅವಘಡ ನಡೆದಿದೆ. ಮೃತ ನಾಲ್ವರೂ ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ. ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30), ಮೃತ ದುರ್ದೈವಿಗಳು. ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ಗೊತ್ತಾಗಿದೆ. ಸ್ಥಳಕ್ಕೆ ಎಸ್ಪಿ ಅಮರನಾಥ್ ರೆಡ್ಡಿ ಹಾಗೂ ಬೀಳಗಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.