ಹುಬ್ಬಳ್ಳಿ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಸಿದ್ದಪ್ಪಜ್ಜನ ದೇವಸ್ಥಾನದ ಹತ್ತಿರ ತಡರಾತ್ರಿ ನಡೆದಿದೆ.

ಗಿರಣಿಚಾಳ ನಿವಾಸಿ ರಾಹುಲ್ ಹಿರೇಮನಿ ಎಂಬ ಯುವಕ ಸಾವನ್ನಪ್ಪಿದ್ದಾನೆ. ಬೈಕ್ ಸ್ಕಿಡ್ ಆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ತನಿಖೆಯ ಬಳಿಕ ತಿಳಿದು ಬರಲಿದ್ದು, ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.