ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊರ್ವನ ಮೇಲೆ ಚಾಕು ಇರಿದಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಅಯೋದ್ಯಾ ನಗರದಲ್ಲಿ ಮಾರುತಿ ನಾರಾಯಣಪುರ ಎಂಬಾತನ ಬೆನ್ನಿಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಗೊಂಡಿರುವ ವ್ಯಕ್ತಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಮಹಾನಿಂಗ ನಂದಗಾವಿ ಹಾಗೂ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಘಟನೆಯ ಮಾಹಿತಿ ಕಲೆ ಹಾಕುತ್ತಿದ್ದಾರೆ.