ಹುಬ್ಬಳ್ಳಿ: ರಾತ್ರೋರಾತ್ರಿ ಕಳ್ಳರು ಬ್ಯಾಂಕ್ ದರೋಡೆಗೆ ಯತ್ನ ಮಾಡಿ ಪರಾರಿಯಾಗಿರುವ ಘಟನೆ ನಗರದ ಎಪಿಎಂಸಿ ಆವರಣದಲ್ಲಿರುವ ಬ್ಯಾಂಕ್ ನಲ್ಲಿ ನಡೆದಿದೆ.
ಕೆನರಾ ಬ್ಯಾಂಕ್ ನಲ್ಲಿ ಕಳ್ಳರು ಕೈಚಳಕ ತೋರಿ ದರೋಡೆ ಯತ್ನ ಮಾಡಲು ಮುಂದಾಗಿದ್ದು, ಪ್ರಯತ್ನ ವಿಫಲವಾಗಿದೆ.
ನವನಗರ ಎಪಿಎಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.