ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕು ವಳೆಗೆರ ಮೆಣಸ ಗ್ರಾಮದಲ್ಲಿ ನಡೆದಿದೆ.
ವಳಗೆರೆ ಮೆಣಸ ಗ್ರಾಮದ ಲೋಹಿತ್ ನವೀನ್ (35) ಮೃತ ದುರ್ದೈವಿ. ಈತ ವಿವಿಧ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದಿದ್ದನಂತೆ.ಕಳೆದ ವಾರ ಸಾಲಗಾರರ ಕಾಟಕ್ಕೆ ಬೇಸತ್ತು K.R.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದನಂತೆ.

ಆದರೆ ಪೊಲೀಸರಿಂದ ಯಾವುದೇ ಸಹಕಾರ ಸಿಕ್ಕಿಲ್ಲ. ಇದಕ್ಕೆ ಬೇಸತ್ತು ಇಂದು ಮುಂಜಾನೆ ತನ್ನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸದ್ಯ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.