ಸೈಕೊ ಪ್ರೇಮಿಯೊಬ್ಬ ಪ್ರೇಯಿಸಿಯ ಕತ್ತು ಸೀಳೆ ಬರ್ಬರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.
ಐಶ್ವರ್ಯಾ ಮಹೇಶ್ ಲೋಹಾರ(18) ಕೊಲೆಯಾದ ಯುವತಿ. ಇನ್ನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.