ಉದ್ಯಮಿ ಜಮೀರ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದ್ದು, ಪ್ರಾಣರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ತಾಲೂಕಿನ ಹಳಿಯಾಳ ರಸ್ತೆಯ ಡೋಗಿನಾಳದಲ್ಲಿ ನಡೆದಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯಲು ಹೋದ ಸಂದರ್ಭದಲ್ಲಿ ಐವರು ಆರೋಪಿಗಳು ದಾಳಿ ಮಾಡಿದ್ದು, ಪ್ರಾಣರಕ್ಷಣೆಗಾಗಿ ಪೊಲೀಸರು ಆರೋಪಿಗಳಾದ ರಹೀಮ್ ಅಲ್ಲಾಹುದ್ದೀನ್ ಹಾಗೂ ಅಜೇಯ ಎಂಬ ಇಬ್ಬರು ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿದ್ದು, ಇವರು ಧಾರವಾಡ ಕೊಲೆ ಪ್ರಕರಣದ ನಟೋರಿಯಸ್ ಆರೋಪಿಗಳಾಗಿದ್ದಾರೆ.

ಫೈರಿಂಗ್ ಗೆ ಒಳಗೊಂಡ ಆರೋಪಿಗಳನ್ನು ಕಾರವಾರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾರವಾರ ಎಸ್ಪಿ ಜಗದೀಶ್ ಮತ್ತು ಡಿವೈಎಸ್ಪಿ ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.